ಕರ್ನಾಟಕ

karnataka

ETV Bharat / state

ಪ್ರಧಾನಿ ಮೋದಿ ಹುಟ್ಟುಹಬ್ಬ: ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ - Minister C.T. Ravi

ಹಿರೇಮಗಳೂರಿನ ಕಲ್ಯಾಣಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ಅವರ ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯಿತು.

Cleanup work under  C.T.  Ravi
ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ

By

Published : Sep 17, 2020, 2:38 PM IST

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 70ನೇ ಹುಟ್ಟು ಹಬ್ಬದ ಅಂಗವಾಗಿ ನಗರದ ಹೊರವಲಯದಲ್ಲಿರುವ ಹಿರೇಮಗಳೂರಿನ ಕಲ್ಯಾಣಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ಅವರ ನೇತೃತ್ವದಲ್ಲಿ ಸ್ವಚ್ಛಗೊಳಿಸಿದರು.

ಪ್ರಧಾನಿ ಮೋದಿಯವರ ಹುಟ್ಟುಹಬ್ಬ: ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ

ನಂತರ ಮಾತನಾಡಿದ ಸಚಿವ ಸಿ. ಟಿ. ರವಿ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಆದರೆ ದೇಶದ ಜನ ಹಾಗೂ ಬಿಜೆಪಿಯ ಕಾರ್ಯಕರ್ತರು ಅಭಿಮಾನದಿಂದ ಅವರ ಜನ್ಮ ದಿನವನ್ನು ಸೇವಾ ಸಪ್ತಾಹವನ್ನಾಗಿ, ಏಳು ದಿನಗಳ ಕಾಲ ಸೇವಾ ಚಟುವಟಿಕೆಗಳನ್ನು ಮಾಡುವುದರ ಮೂಲಕ ಆಚರಣೆ ಮಾಡುತ್ತಿದ್ದೇವೆ. ಮೋದಿ ಅವರು ನಮ್ಮ ದೇಶದ ಹೆಮ್ಮೆ. ನಮ್ಮ ದೇಶಕ್ಕೆ ಪ್ರಾಮಾಣಿಕ ನೇತೃತ್ವವನ್ನು ಕೊಟ್ಟು, ಬಡವರ ಪರವಾಗಿ ಸದಾಕಾಲ ಕೆಲಸವ ಮಾಡುತ್ತಿರುವ ವ್ಯಕ್ತಿ. ಭಾರತವನ್ನು ಬಲಪಡಿಸುವ ನಿಟ್ಟಿನಲ್ಲಿ ನಿತ್ಯ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೂ ಜಾಗತಿಕ ನಾಯಕನಾಗಿ ಹೊರ ಹೊಮ್ಮಿದ್ದಾರೆ ಎಂದರು.

ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ

42 ಕೋಟಿ ಜನರಿಗೆ ನೇರವಾಗಿ ನಗದು ಹಣವನ್ನು ಅವರ ಅಕೌಂಟ್​​ಗೆ ವರ್ಗಾವಣೆ ಮೂಲಕ ಪ್ರಾಮಾಣಿಕ ವ್ಯವಸ್ಥೆಯನ್ನು ಬಿತ್ತಿ ಬೆಳೆಸಿದ್ದಾರೆ. ಆತ್ಮ ನಿರ್ಭರ್ ಘೋಷಣೆ ಮೂಲಕ ಪ್ರತಿ ಕುಟುಂಬ ಸ್ವಾವಲಂಬಿ ಆಗಬೇಕು ಎಂದು ಕೆಲಸ ಮಾಡುತ್ತಿದ್ದಾರೆ ಎಂದರು.

ABOUT THE AUTHOR

...view details