ಚಿಕ್ಕಮಗಳೂರು: ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಜಿಲ್ಲೆಯ ಕಡೂರು ಮೂಲದ ಧನ್ರಾಜ್(47) ಪೊಲೀಸರ ಕಣ್ತಪ್ಪಿಸಿ ಓಡಿ ಹೋಗಿರುವ ವಿಚಾರಣಾಧೀನ ಕೈದಿ. ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಧನರಾಜ್‍ನನ್ನು ಪೊಲೀಸರು ನ್ಯಾಯಾಲಯದ ವಶಕ್ಕೆ ನೀಡಿದ್ದರು.
ಜೈಲಿನಲ್ಲಿ ಆರಾಮಾಗಿದ್ದ ಧನ್ರಾಜ್ಗೆ ಕಳೆದ ಎರಡು ದಿನಗಳಿಂದ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರು ಪೇರಾಗಿತ್ತು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಜೈಲಿನಿಂದ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆರೋಪಿ ಕಾವಲಿಗೆ ಓರ್ವ ಜೈಲು ಸಿಬ್ಬಂದಿ ಹಾಗೂ ಮತ್ತೋರ್ವ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಓರ್ವ ಸಿಬ್ಬಂದಿ ಊಟಕ್ಕೆ ಹೋದ ಸಂದರ್ಭದಲ್ಲಿ ಮತ್ತೋರ್ವ ಸಿಬ್ಬಂದಿಯನ್ನು ತಳ್ಳಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ.