ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಬಸ್, ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - ಚಿಕ್ಕಮಗಳೂರು ಲೆಟೆಸ್ಟ್ ನ್ಯುಸ್
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಅಮೃತ್ ಮಹಲ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಖಾಸಗಿ ಬಸ್, ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಅಮೃತ್ ಮಹಲ್ ಬಳಿ ಅಪಘಾತ ನಡೆದಿದ್ದು, ಕಿರಣ್(26) ಮತ್ತು ನಾಗರಾಜ್ ನಾಯಕ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತರೀಕೆರೆಯಿಂದ ಲಿಂಗದ ಹಳ್ಳಿ ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್ಗೆ ಬೈಕ್ ಸವಾರರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಖಾಸಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಬಸ್ನಲ್ಲಿದ್ದ ಮೂರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಿಂಗದಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.