ಚಿಕ್ಕಮಗಳೂರು:ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬಂದ್ಗೆ ಕರೆ ನೀಡಿದಂತಹ ವಿವಿಧ ಸಂಘಟನೆಗಳು ವಿಭಿನ್ನವಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.
ಬಿಜೆಪಿ ನಾಯಕರ ಅಣಕು ಶ್ರದ್ಧಾಂಜಲಿ ನಡೆಸಿ ಚಿಕ್ಕಮಗಳೂರಲ್ಲಿ ಪ್ರತಿಭಟನೆ - bharat bandh updates
ನಗರದ ಅಜಾದ್ ವೃತ್ತದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗು ಸಿಎಂ ಬಿಎಸ್ವೈ ಭಾವಚಿತ್ರಗಳನ್ನಿಟ್ಟು ಅಣಕು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು: ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಹೋರಾಟಗಾರರು
ಓದಿ:ಭಾರತ್ ಬಂದ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
ನಡು ರಸ್ತೆಯಲ್ಲಿ ರಾಜಕೀಯ ನಾಯಕರ ಭಾವಚಿತ್ರಗಳಿಗೆ ಹಣ್ಣುಕಾಯಿ ಸಮರ್ಪಿಸಿ, ಪೂಜೆ ಸಲ್ಲಿಸಿ 'ಮತ್ತೆ ಹುಟ್ಟಿ ಬರಬೇಡಿ' ಎಂದು ವ್ಯಂಗ್ಯ ಘೋಷಣೆ ಕೂಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
Last Updated : Dec 8, 2020, 3:04 PM IST