ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಲು ಬಂದವರು ಪೊಲೀಸ್ ವಶಕ್ಕೆ - ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಲು

ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಕೊಡಗಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇಂದು ಶೃಂಗೇರಿಯಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಲು ಬಂದಾಗ ಪೊಲೀಸರು ವಶಕ್ಕೆ ಪಡೆದರು.

ಚಿಕ್ಕಮಗಳೂರಲ್ಲಿ ಸಿದ್ದರಾಮಯ್ಯ
ಚಿಕ್ಕಮಗಳೂರಲ್ಲಿ ಸಿದ್ದರಾಮಯ್ಯ

By

Published : Aug 19, 2022, 3:09 PM IST

Updated : Aug 19, 2022, 3:15 PM IST

ಚಿಕ್ಕಮಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತರನ್ನು ಶೃಂಗೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಪ್ಪು ಬಾವುಟ ಪ್ರದರ್ಶಿಸಲು ಕಾರ್ಯಕರ್ತರು ಮುಂದಾದಾಗ ಘಟನೆ ನಡೆದಿದೆ. ಮಾತಿನ ಚಕಮಕಿ ನಡೆದು 30ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಲು ಬಂದವರು ಪೊಲೀಸ್ ವಶಕ್ಕೆ

ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಸೇರಿದಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. "ಬಿಜೆಪಿ, ಆರ್.ಎಸ್.ಎಸ್‌ನವರ ಗೊಡ್ಡು ಬೆದರಿಕೆಗೆ ಜಗ್ಗುವುದಿಲ್ಲ. ನಮ್ಮಲ್ಲೂ ಕಾರ್ಯಕರ್ತರಿದ್ದಾರೆ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ.. ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

Last Updated : Aug 19, 2022, 3:15 PM IST

ABOUT THE AUTHOR

...view details