ಚಿಕ್ಕಮಗಳೂರು: ಬೆಳಗಾವಿಯಲ್ಲಿ ಕನ್ನಡಿಗರ ವಿರುದ್ಧ ದಾಂಧಲೆ ಮಾಡುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಮಗಳೂರು; ಎಂಇಎಸ್ ಕಾರ್ಯಕರ್ತರ ಗಡಿಪಾರಿಗೆ ಒತ್ತಾಯ - latest protest in chikmagalore
ಬೆಳಗಾವಿಯಲ್ಲಿ ಕನ್ನಡಿಗರ ವಿರುದ್ಧ ದಾಂಧಲೆ ನಡೆಸುತ್ತಿರುವ ಎಂಇಎಸ್ ಕಾರ್ಯಕರ್ತರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಿ, ಕೂಡಲೇ ಅವರನ್ನು ಗಡಿಪಾರು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಂಇಎಸ್ ಪುಂಡ ಕಾರ್ಯಕರ್ತರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಿ, ಕೂಡಲೇ ಅವರನ್ನು ಗಡಿಪಾರು ಮಾಡಬೇಕು. ಬೆಳಗಾವಿಯಲ್ಲಿ ಎರಡು ಕಡೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಬೇಕು. ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಮ್ಮ ನಾಡಿನ ಅನ್ನ ತಿಂದು ಬೆಳಗಾವಿಯಲ್ಲಿ ನೆಮ್ಮದಿಯ ಜೀವನ ಮಾಡಿಕೊಂಡು ಇರುವ ಕೆಲವು ಮರಾಠಿ ಪುಂಡ ಕಾರ್ಯಕರ್ತರು, ಕೆಲ ನಾಡದ್ರೋಹಿ ರಾಜಕಾರಣಿಗಳ ಕೈವಾಡದಿಂದ ಚಪ್ಪಲಿಯನ್ನು ಎಸೆಯುವುದರ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದಾರೆ. ಬೆಳಗಾವಿಯಲ್ಲಿ ಸ್ವಾಭಿಮಾನಿ ಕನ್ನಡಿಗರು ಪೀರನವಾಡಿಯಲ್ಲಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಸಾರ್ವಭೌಮತ್ವ ಸಿಗಬೇಕು. ನಾಡದ್ರೋಹಿ ಎಂಇಎಸ್ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು .