ಚಿಕ್ಕಮಗಳೂರು:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ, ಕಡೂರು - ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕಡೂರು ತಾಲೂಕಿನ ಮುಸ್ಲಿಂ ಸಮುದಾಯದವರು ಭಾಗವಹಿಸಿ ನಗರದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನೆ ನಡೆಸಿದರು.
ಬೀರೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಕಾಂಗ್ರೆಸ್ ಮುಖಂಡ ಆನಂದ್ ಮಾತನಾಡಿ, ಟಿಪ್ಪು ಒಬ್ಬ ಮಹಾನ್ ದೇಶ ಭಕ್ತ. ದೇಶಕ್ಕಾಗಿ ತನ್ನ ಇಬ್ಬರು ಮಕ್ಕಳನ್ನು ಒತ್ತೆಯಿಟ್ಟು ಬ್ರಿಟೀಷರ ವಿರುದ್ಧ ಹೋರಾಡಿದ ಕರ್ನಾಟಕದ ಹೆಮ್ಮೆಯ ಪುತ್ರ. ಇಂತಹ ವ್ಯಕ್ತಿಯ ಜಯಂತಿಯನ್ನು ಸಿದ್ದರಾಮಯ್ಯ ಸರ್ಕಾರ ಇದ್ದಾಗ ರಾಜ್ಯದಲ್ಲಿ ಜಾರಿಗೆ ತಂದಿದ್ದರು. ಆದರೆ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೂಡಲೇ ಟಿಪ್ಪು ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಮೂಲಕ ಕಡೂರು ತಹಶೀಲ್ದಾರ್ ಉಮೇಶ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯ್ತು.