ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಬೈಕ್, ಕಾರಿಗೆ ಹಗ್ಗ ಕಟ್ಟಿ ಎಳೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು: ಕಾರಿಗೆ ಹಗ್ಗ ಕಟ್ಟಿ ಎಳೆದು ಕೈ ಕಾರ್ಯಕರ್ತರಿಂದ ಪ್ರತಿಭಟನೆ - chikmagalur-protests-by-congress-
ಕಾರಿನ ಡೀಸೆಲ್ ಟ್ಯಾಂಕ್ ಹಾಗೂ ಗ್ಲಾಸ್ಗೆ ಮೋದಿಯವರ ಭಾವಚಿತ್ರ ಅಂಟಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾರ್ವಜನಿಕರ ಬಳಿ ದರೋಡೆ ಮಾಡುತ್ತಿದೆ. ಪ್ರತಿನಿತ್ಯ ಜನರನ್ನು ಈ ಸರ್ಕಾರ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದು, ಜೀವನ ಮಾಡುವುದೇ ಕಷ್ಟಕರವಾಗಿದೆ ಎಂದು ಆಗ್ರಹಿಸಿದರು.
ಪ್ರತಿಭಟನೆ
ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಕಾರಿಗೆ ಹಗ್ಗ ಕಟ್ಟಿ ಮೆರವಣಿಗೆ ಮಾಡಿದರು. ಕಾರಿನ ಡೀಸೆಲ್ ಟ್ಯಾಂಕ್ ಹಾಗೂ ಗ್ಲಾಸ್ಗೆ ಮೋದಿ ಭಾವಚಿತ್ರ ಅಂಟಿಸಿ ಘೋಷಣೆ ಕೂಗಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರ ದರೋಡೆ ಮಾಡುತ್ತಿವೆ. ಪ್ರತಿನಿತ್ಯ ಜನರನ್ನು ಈ ಸರ್ಕಾರ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದು, ಜೀವನ ಮಾಡುವುದೇ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.