ಚಿಕ್ಕಮಗಳೂರು:ಕೇಂದ್ರ ಸರ್ಕಾರ ಐಟಿ,ಇಡಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ..
ಚಿಕ್ಕಮಗಳೂರು:ಕೇಂದ್ರ ಸರ್ಕಾರ ಐಟಿ,ಇಡಿ ಇಲಾಖೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಹನುಮಂತಪ್ಪ ವೃತ್ತದಲ್ಲಿ 50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.