ಕರ್ನಾಟಕ

karnataka

ETV Bharat / state

ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ - ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್​​ರನ್ನು ತೇಜೋವಧೆ ಮಾಡಲಾಗಿದೆ

ಸಂವಿಧಾನವನ್ನು ಅಂಬೇಡ್ಕರ್ ಅವರು ಒಬ್ಬರೇ ಬರೆದಿಲ್ಲ ಎಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್​​ರನ್ನು ತೇಜೋವಧೆ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಯ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು.

ಅಂಬೇಡ್ಕರ್ ತೇಜೋವಧೆ; ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

By

Published : Nov 20, 2019, 3:37 PM IST

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್​​ರನ್ನು ತೇಜೋವಧೆ ಮಾಡಲಾಗಿದೆ ಎಂದು ಚಿಕ್ಕಮಗಳೂರಿನಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ತೇಜೋವಧೆ ಆರೋಪ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

ಚಿಕ್ಕಮಗಳೂರಿನ ತಾಲೂಕು ಕಚೇರಿ ಆವರಣದಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಬೃಹತ್ ಮೆರವಣಿಗೆ ಮಾಡಿ ಪ್ರತಿಭಟಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದಲೇ ಭಾರತ ಬಲಿಷ್ಠವಾಗಿದೆ. ಭಾರತದ ಪ್ರಜಾತಾಂತ್ರಿಕ ಆಡಳಿತ ವ್ಯವಸ್ಥೆಯೂ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಆದರೆ ಭಾರತದ ಜೀವಾಳ ಆಗಿರುವ ಗಣತಂತ್ರ ವ್ಯವಸ್ಥೆಯನ್ನು ಬುಡಮೇಲುಗೊಳಿಸಲು ಕೆಲವು ರಾಜಕೀಯ ಹಿತಾಸಕ್ತಿಗಳು ಪಿತೂರಿ ನಡೆಸಿವೆ.

ನಿರಂತರವಾಗಿ ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಿದ್ದಾರೆ. ಸಂವಿಧಾನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಸುಳ್ಳುಗಳನ್ನೇ ಸಾವಿರ ಸಲ ಹೇಳಿ ಸತ್ಯವೆಂದು ಪ್ರಚಾರ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು.

ನವಂಬರ್ 26 ರಂದು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನ ಆಚರಿಸಲು ಹಮ್ಮಿಕೊಂಡಿರುವ ಕಾರ್ಯಕ್ರಮದ ಜಾರಿಗಾಗಿ ಹೊರಡಿಸುವ ಸುತ್ತೋಲೆಯಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರು ಒಬ್ಬರೇ ಬರೆದಿಲ್ಲ ಎಂದು ನಮೂದು ಮಾಡಿರುವುದು ಸರಿಯಲ್ಲ. ಇತಿಹಾಸವನ್ನು ತಿರುಚಿದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಿರ್ದೇಶಕ ಕೆ.ಎಸ್.ಮಣಿ ಸೇರಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details