ಕರ್ನಾಟಕ

karnataka

ETV Bharat / state

ತರೀಕೆರೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ - ಚಿಕ್ಕಮಗಳೂರು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಪೌರತ್ವ ಮಸೂದೆಯು ಸಂವಿಧಾನದ ಮೂಲಕ ಆಶಯಗಳಿಗೆ ವಿರುದ್ಧವಾದದು. ಇದು ದೇಶದ ಜನರನ್ನು ವಿಭಜಿಸುವ ದುರುದ್ದೇಶ ಹೊಂದಿದೆ ಎಂದು ತರೀಕೆರೆಯಲ್ಲಿ ಪ್ರತಿಭಟನಾಕಾರರು ದೂರಿದರು.

Protest in Terekere
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

By

Published : Dec 18, 2019, 11:39 PM IST

ಚಿಕ್ಕಮಗಳೂರು:ಜಿಲ್ಲೆಯ ತರೀಕೆರೆ ತಾಲೂಕಿನ ಗಾಂಧಿ ವೃತ್ತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ತರೀಕೆರೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆಯನ್ನು ನಮ್ಮ ಸಂವಿಧಾನ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ಧರ್ಮದ ಆಧಾರದಲ್ಲಿ ದೇಶದ ಜನತೆಯನ್ನು ವಿಭಜಿಸುವ ದುರುದ್ದೇಶವನ್ನು ಈ ಕಾಯ್ಡೆ ಹೊಂದಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು. ರಾಷ್ಟ್ರೀಯ ಐಕ್ಯತೆ, ಸಮಗ್ರತೆ ಹಾಗೂ ಬ್ರಾತೃತ್ವಕ್ಕೆ ಧಕ್ಕೆ ಉಂಟು ಮಾಡುವಂತಹ ಈ ಮಸೂದೆಯನ್ನು ರದ್ದು ಪಡಿಸುವ ಮೂಲಕ ಭಾರತ ಜಾತ್ಯಾತೀತ ಮತ್ತು ಧರ್ಮ ನಿರಪೇಕ್ಷಕ ತತ್ವಗಳನ್ನು ಎತ್ತಿ ಹಿಡಿಯಲು ಮುಂದಾಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ತರೀಕೆರೆಯ ಕಾಂಗ್ರೆಸ್ ಮಾಜಿ ಶಾಸಕ ಜಿ.ಹೆಚ್ ಶ್ರೀನಿವಾಸ್ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details