ಚಿಕ್ಕಮಗಳೂರು:ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ಧಿ ಸಂಘದ ವತಿಯಿಂದ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಜ್ಯೋತಿ ಭತ್ತಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ - ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆ
ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಭದ್ರಾ ರೈತರ ಅಭಿವೃದ್ಧಿ ಸಂಘದ ವತಿಯಿಂದ ಭತ್ತದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಲಕ್ಕವಳ್ಳಿಯ ಬಸವೇಶ್ವರ ಆಸ್ವತ್ರೆಯ ಮುಂಭಾಗದಿಂದ ಲಕ್ಕವಳ್ಳಿಯ ಬಸ್ ನಿಲ್ಡಾಣದವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ನೂರಾರು ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಕವಳ್ಳಿ ಹೋಬಳಿ ಪ್ರದೇಶದಲ್ಲಿ ರೈತರು ಅತಿ ಹೆಚ್ಚಾಗಿ ಜ್ಯೋತಿ ಭತ್ತವನ್ನು ಬೆಳೆಯುತ್ತಿದ್ದು, ಕಳೆದ ವಾರ ಪ್ರತಿ ಕ್ವಿಂಟಾಲ್ಗೆ 2,500 ರೂ. ಬೆಲೆ ಇತ್ತು. ಆದರೆ ಒಂದು ವಾರದಲ್ಲಿಯೇ 1,700 ರೂ.ಗೆ ಇಳಿದಿದ್ದು, ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿ ತೊಂದರೆಗೆ ಸಿಲುಕಿದ್ದಾರೆ.
ಈ ಬಾರಿಯ ಮಳೆಯಿಂದ ಫಸಲು ಸಹ ಕುಂಠಿತವಾಗಿದ್ದು, ಈಗ ಬಂದಿರುವಂತಹ ಅಲ್ಪಸ್ವಲ್ಪ ಇಳುವರಿಗೂ ಸಹ ನಿರೀಕ್ಷಿತ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರೈತರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು ಹಾಗೂ ಭತ್ತದ ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ತರೀಕೆರೆ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.