ಚಿಕ್ಕಮಗಳೂರು:ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಉತ್ತೇಜನ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹಾಗೂ ಅಧಿಕಾರಿಗಳು, ಕೈಗಾರಿಕೋದ್ಯಮಿಗಳ ಸಭೆ ನಡೆಸಿದ್ರು. ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆಗಳನ್ನು ಪ್ರಾರಂಭಿಸಿ, ಜನಸಾಮಾನ್ಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸೃಷ್ಟಿಸಬೇಕೆಂಬ ಉದ್ದೇಶದಿಂದ ಸರ್ಕಾರ ಕೈಗಾರಿಕಾ ನೀತಿ ಹಾಗೂ ಲ್ಯಾಂಡ್ ರಿಫಾರ್ಮ್ ಕಾಯ್ದೆಗಳಲ್ಲಿ ತಿದ್ದುಪಡಿ ತಂದಿದೆ.
ಕೈಗಾರಿಕೋದ್ಯಮಿಗಳ ಸಭೆ ನಡೆಸಿದ ಜಗದೀಶ್ ಶೆಟ್ಟರ್ ಇದರಿಂದಾಗಿ ರಾಜ್ಯದಲ್ಲಿ ಹೆಚ್ಚು ಕೈಗಾರಿಕೆಗಳು ಹೊಸದಾಗಿ ಬೆಳವಣಿಗೆಯಾಗಲು ಸಹಕಾರಿಯಾಗಲಿದೆ. ಕರ್ನಾಟಕ ಇಂಡಸ್ಟ್ರಿಯಲ್ ಮಿಸಿಲೇಷನ್ ಕಾಯ್ದೆಯಲ್ಲಿ ಕೆಲವೊಂದು ತಿದ್ದುಪಡಿ ತರುವುದರೊಂದಿಗೆ ಉದ್ಯಮಿಗಳು ಕೈಗಾರಿಕೆಯನ್ನು ಸ್ಥಾಪನೆ ಮಾಡಿ ನಂತರದ ಮೂರು ವರ್ಷಗಳಲ್ಲಿ ಕೆಲವೊಂದು ಅನುಮತಿಗಳನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಬೃಹತ್ ಕೈಗಾರಿಕೆಗಳಿದ್ದು, 160.83 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇಲ್ಲಿ 810 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, 5 ಮಧ್ಯಮ ಕೈಗಾರಿಕೆಗಳಿವೆ. 43.97 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಇಲ್ಲಿ 348 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜೊತೆಗೆ 5,912 ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ್ಳಿದ್ದು, 23 ಸಾವಿರದ 89 ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.