ಕರ್ನಾಟಕ

karnataka

ETV Bharat / state

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ : PSIಗೆ 15 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಹಾಗೂ ಪಿಎಸ್​ಐ ಅರ್ಜುನ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಪಿಎಸ್​ಐ ಅರ್ಜುನ್
PSI arjun

By

Published : Sep 2, 2021, 5:05 PM IST

ಚಿಕ್ಕಮಗಳೂರು:ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಬಂಧಿತ ಆರೋಪಿ ಪಿಎಸ್​ಐ ಅರ್ಜುನ್​​​ಗೆ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದು ಬೆಳಗ್ಗೆ ಅರ್ಜುನ್ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕರೆತಂದ ಸಿಐಡಿ ಪೊಲೀಸರ ತಂಡ, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯಲ್ಲಿ ಅರ್ಜುನ್ ಪಿಎಸ್​ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಮೇ 10 ರಂದು ದಲಿತ ಯುವಕ ಪುನೀತ್​ ಎಂಬಾತ ಮೇಲೆ ಠಾಣೆಯಲ್ಲೇ ದೈಹಿಕ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಸಂತ್ರಸ್ತ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದನು.

ಆ ಬಳಿಕ ಪಿಎಸ್​ಐ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಸರ್ಕಾರ ಅರ್ಜುನ್ ಅವರನ್ನು ಅಮಾನತು ಮಾಡಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ನಡುವೆ ಬಂಧನಕ್ಕೊಳಗಾಗುವುದರಿಂದ ತಪ್ಪಿಸಿಕೊಳ್ಳಲು ಪಿಎಸ್​ಐ ಅರ್ಜುನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಸೆ.01 ರಂದು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಅರ್ಜುನ್ ಅವರನ್ನು ಬಂಧಿಸಲಾಗಿತ್ತು.

ಓದಿ: PSI ಮೂತ್ರ ಕುಡಿಸಿದ ಪ್ರಕರಣ ಸಂಬಂಧ ವಿಡಿಯೋ ಹರಿಬಿಟ್ಟ ಯುವಕ ಹೇಳಿದ್ದಿಷ್ಟು..

ABOUT THE AUTHOR

...view details