ಚಿಕ್ಕಮಗಳೂರು :ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆ ಇಂದು ಜಿಲ್ಲೆಯ ಶೃಂಗೇರಿ ಶಾರದಾಂಬೆ ಪೀಠಕ್ಕೆ ಬಿಜೆಪಿ ಮುಖಂಡರ ಜೊತೆ ಭೇಟಿ ನೀಡಿದ್ದಾರೆ.
ಶೃಂಗೇರಿ ಶಾರದಾಂಬೆ ಪೀಠದಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ - undefined
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶೋಭಾ ಕರಂದ್ಲಾಜೆ ಶೃಂಗೇರಿ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿದರು.

ಶೋಭಾ ಕರಂದ್ಲಾಜೆ
ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗುರು ನಿವಾಸದಲ್ಲಿರುವ ಶ್ರೀ ಜಗದ್ಗುರುಗಳ ನಿವಾಸಕ್ಕೆ ತೆರಳಿ ಅವರ ಜೊತೆ ಕೆಲ ಕಾಲ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದಿದ್ದಾರೆ. 3,49,599 ಲಕ್ಷ ಮತಗಳ ಅಂತರದಿಂದ ಪ್ರತಿಸ್ಪರ್ಧಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ಸಾಧಿಸಿದ್ದಾರೆ.