ಚಿಕ್ಕಮಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಜಿಲ್ಲಾ ತನಿಖಾ ದಳ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್, ಕೆ.ಎಂ.ರಸ್ತೆ, ಛತ್ರದ ಮೈದಾನದ ರಸ್ತೆ, ಹಳೇ ಮೂಡಿಗೆರೆ ವ್ಯಾಪ್ತಿಯಲ್ಲಿನ ಸಿಗರೇಟ್ಸ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಅಂಗಡಿ ಮುಂಗಟ್ಟು, ಹೋಟೆಲ್, ಪಾನ್ ಶಾಪ್, ಪ್ರಾವಿಜನ್ ಸ್ಟೋರ್‍ಸ್, ಬೇಕರಿ ಸೇರಿದಂತೆ ವಿವಿಧ ಮಳಿಗೆಗಳ ಮೇಲೆ ದಾಳಿ ನಡೆಸಿದರು.