ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಕಳೆದ ಅರ್ಧ ಗಂಟೆಯಿಂದ ನಿರಂತರವಾಗಿ ಎಡೆ ಬಿಡದೇ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ.... ಹೆಚ್ಚಿದ ಆತಂಕ - rain in chikkamagalur
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಮತ್ತೆ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಮಳೆಯಿಂದ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯಾಗಿದೆ.

ckm
ಮತ್ತೆ ಮಳೆಯಾಗುತ್ತಿರೋದು ಮಲೆನಾಡಿನ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹತ್ತಾರು ಪ್ರದೇಶಗಳಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರೆವುಗೊಳಿಸುವ ಕಾರ್ಯವೇ ಸರಿಯಾಗಿ ಮುಗಿದಿಲ್ಲ. ಇದರ ಮಧ್ಯೆ ಮತ್ತೆ ಮಳೆ ಆರಂಭ ಆಗಿರೋದು ಜನರಲ್ಲಿ ಆತಂಕ ಮೂಡಿಸುವಂತೆ ಮಾಡಿದೆ.
ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆ
ಈಗ ಮಳೆಯಾಗುತ್ತಿರುವ ಕಾರಣ ಮಣ್ಣು ತೆರವು ಕಾರ್ಯಚರಣೆಗೂ ಅಡ್ಡಿ ಉಂಟು ಮಾಡುತ್ತಿದೆ. ಆಗಿರೋ ಅನಾಹುತಗಳಿಂದ ನೂರಾರು ಜನರು ನಿರಾಶ್ರಿತರ ಕೇಂದ್ರದಲ್ಲಿ ವಾಸ ಮಾಡುತ್ತಿದ್ದಾರೆ. ಈ ಮಳೆಯಿಂದಾಗಿ ನಿರಾಶ್ರಿತರಲ್ಲಿ ಆತಂಕ ಮೂಡುತ್ತಿದೆ.