ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ - Rain

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಧಾರಕಾರವಾಗಿ ಮಳೆ ಸುರಿಯುತ್ತಿದೆ.

vfsdfd
ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

By

Published : Aug 21, 2020, 12:52 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯಲು ಪ್ರಾರಂಭವಾಗಿದೆ. ಮುಂಜಾನೆಯಿಂದ ಪ್ರಾರಂಭವಾಗಿರುವ ಮಳೆಗೆ ಮಲೆನಾಡಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ದಾರದಹಳ್ಳಿ, ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೂ ನಿರಂತರ ಸುರಿಯುತ್ತಿರುವ ಮಳೆಯಿಂದ ಮಳೆಯ ನೀರು ರಸ್ತೆಯ ಮೇಲೆ ನುಗ್ಗುತ್ತಿದ್ದು, ಮಳೆಯ ನಡುವೆಯೇ ಹೆಂಗಳೆಯರು ಗೌರಿಯನ್ನು ಪೂಜೆ ಮಾಡಿ ಗೌರಿಯನ್ನು ಬರ ಮಾಡಿಕೊಂಡಿದ್ದಾರೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಬಿಡುವು ನೀಡಿದ್ದ. ಇಂದಿನಿಂದ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದ ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯವಾಗಿದೆ.

ABOUT THE AUTHOR

...view details