ಚಿಕ್ಕಮಗಳೂರು: ಮಾಜಿ ಶಾಸಕ ಡಿ. ಎನ್. ಜೀವರಾಜ್ ಸರ್ಕಾರದ ಅನುದಾನ ತಡೆ ಹಿಡಿಯುತ್ತಿದ್ದಾರೆ ಹಾಗೂ ಕೇಂದ್ರ-ರಾಜ್ಯ ಸರ್ಕಾರಗಳು ಜನ ವಿರೋಧಿ ಕಾಯ್ದೆಯನ್ನು ಜಾರಿಗೊಳಿಸಿವೆ ಎಂದು ಆರೋಪಿಸಿ ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಸರ್ಕಾರದ ವಿರುದ್ಧ ಶಾಸಕ ಟಿ. ಡಿ. ರಾಜೇಗೌಡ ಉಪವಾಸ ಸತ್ಯಾಗ್ರಹ - ಮಾಜಿ ಶಾಸಕ ಡಿ. ಎನ್. ಜೀವರಾಜ್ ವಿರುದ್ದ ರಾಜೇಗೌಡ ಆಕ್ರೋಶ
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾದ ಹಣವನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಆರೋಪಿಸಿ ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಶಾಸಕ ಟಿ. ಡಿ. ರಾಜೇಗೌಡ ಉಪವಾಸ ಸತ್ಯಾಗ್ರಹ
ಜಿಲ್ಲೆಯ ಕೊಪ್ಪ ತಾಲೂಕು ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದ ಅವರು, ಈ ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾದ ಹಣವನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಘೋಷಣೆ ಕೂಗಿದರು.
ರಾಜಕೀಯ ದ್ವೇಷದಿಂದ ಅನುದಾನದ ಹಣವನ್ನು ತಡೆ ಹಿಡಿದಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಹುಲಿ ಯೋಜನೆ, ಬಫರ್ ಝೋನ್ ಯೋಜನೆ ತಡೆ ಹಿಡಿಯಬೇಕು ಎಂದು ಒತ್ತಾಯಿಸಿದರು. ಈ ವೇಳೆ ರೈತ ಸಂಘದವರು ಸಾಥ್ ನೀಡಿದರು.