ಚಿಕ್ಕಮಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಚಿವ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ರಂಭಾಪುರಿ ಜಗದ್ಗುರುಗಳು - death of Minister Suresh Angadi
ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ಡಾ. ವೀರಸೋಮೇಶ್ವರ ಜಗದ್ಗರುಗಳು ಸಂತಾಪ ಸೂಚಿಸಿದ್ದಾರೆ.
ರಂಭಾಪುರಿ ಜಗದ್ಗುರುಗಳು ಸಂತಾಪ
ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಂತಾಪ ಸೂಚಿಸಿದ್ದು, ಸುರೇಶ್ ಅಂಗಡಿ ಕ್ರಿಯಾಶ್ರೀಲ ವ್ಯಕ್ತಿತ್ವ ಹೊಂದಿದ್ದರು. ಧಾರ್ಮಿಕ ಆಸಕ್ತಿ ಹೊಂದಿದ್ದು, ಪೀಠದ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರ ಅಗಲಿಕೆ ನೋವು ಸಹಿಸಿಕೊಳ್ಳುವ ಶಕ್ತಿ ಕುಟುಂಬ ವರ್ಗಕ್ಕೆ ಅನುಗ್ರಹಿಸಲಿ ಎಂದು ಬಾಳೆಹೊನ್ನೂರು ಪೀಠದ ಜಗದ್ಗುರುಗಳು ಸಂತಾಪ ಸೂಚಿಸಿದ್ದಾರೆ.