ಕರ್ನಾಟಕ

karnataka

ETV Bharat / state

ಗೋಣಿಬೀಡು ದಲಿತ ಯುವಕನ ಮೇಲಿನ ದೌರ್ಜನ್ಯ ಪ್ರಕರಣ : ಕಾನೂನು ಕ್ರಮದ ಭರವಸೆ ನೀಡಿದ ರಾಮುಲು - Ramulu promised legal action against PSI

ಗೋಣಿಬೀಡು ಪ್ರಕರಣದಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು..

 Ramulu promised legal action against PSI over Violence case against Dalit youth
Ramulu promised legal action against PSI over Violence case against Dalit youth

By

Published : May 23, 2021, 9:14 PM IST

ಬೆಂಗಳೂರು: ಗೋಣಿಬೀಡು ಪ್ರಕರಣದಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ತನಿಖೆ ನಡೆಸಿ, ತಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪುನೀತ್ ಎಂಬ ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ಖಂಡನೀಯ. ನ್ಯಾಯ ಒದಗಿಸಬೇಕಾದ ಪೊಲೀಸ್ ಠಾಣೆಯಲ್ಲಿ ಅನ್ಯಾಯ ನಡೆದರೆ ಖಂಡಿತ ನಾವು ಸಹಿಸಲ್ಲ.

ಆರೋಪಿತ ಪಿಎಸ್‌ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೂಡಲೇ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಅನ್ಯಾಯವಾದರೆ, ಅದನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲ್ಲ.

ಗೋಣಿಬೀಡು ಪ್ರಕರಣದಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details