ಚಿಕ್ಕಮಗಳೂರು:ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ.
ಶೃಂಗೇರಿ ಸ್ವಾತಿ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ - ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
![ಶೃಂಗೇರಿ ಸ್ವಾತಿ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ death](https://etvbharatimages.akamaized.net/etvbharat/prod-images/768-512-5753444-thumbnail-3x2-surya.jpg)
ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು, ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಸ್ವಾತಿ ಎಂಬ ಯುವತಿಯನ್ನ ಅತ್ಯಾಚಾರ ಹಾಗೂ ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಈ ಸಂಬಂಧದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ.