ಚಿಕ್ಕಮಗಳೂರು :ಡೆತ್ನೋಟ್ ಬರೆದಿಟ್ಟು ಕಂದಾಯ ನಿರೀಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಕಂದಾಯ ನಿರೀಕ್ಷಕ ಆತ್ಮಹತ್ಯೆ.. ಕಾರಣ?
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಂದಾಯ ನಿರೀಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಂದಾಯ ನಿರೀಕ್ಷಕ ಆತ್ಮಹತ್ಯೆ
ಕಂದಾಯ ನಿರೀಕ್ಷಕ ಸೋಮಶೇಖರ್(55) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಇವರು ಲಕ್ಕವಳ್ಳಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಇಂದು ಭದ್ರಾ ಹಿನ್ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಡೆತ್ನೋಟ್ನಲ್ಲಿ ಮೂವರ ಹೆಸರು ಬರೆದು ಆತ್ಮಹತ್ಯೆಗೆ ಶರಣಾಗಿದ್ದು, ಬಗರಹುಕಂ ಹಾಗೂ ಸ್ಮಶಾನ ಭೂಮಿ ವಿಚಾರ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಲಕ್ಕವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Last Updated : Aug 25, 2021, 7:16 PM IST