ಚಿಕ್ಕಮಗಳೂರು :ನೀರಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಅಣ್ಣ,ತಂಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಳೆ ಲಕ್ಯಾ ಗ್ರಾಮದಲ್ಲಿ ನಡೆದಿದೆ.
ನೀರಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ: ಅಣ್ಣ-ತಂಗಿ ಸ್ಥಳದಲ್ಲೆ ಸಾವು, ಮಗು ಸ್ಥಿತಿ ಗಂಭೀರ - undefined
ಇಂದು ತಾಲೂಕಿನ ಹಳೆ ಲಕ್ಯಾ ಗ್ರಾಮದ ಬಳಿ ನೀರಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಅಣ್ಣ,ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಜೊತೆಯಲ್ಲಿದ್ದ ಮಗು ಗಂಭೀರವಾಗಿ ಗಾಯಗೊಂಡಿದೆ.
Chikmagalur
ಲತಾ ಮಣಿ (25) ,ಅಶೋಕ್ (30) ಮೃತರು. ಇವರು ಕಡೂರು ತಾಲೂಕಿನ ಎಸ್. ಬಿದರೆ ಗ್ರಾಮದವರಾಗಿದ್ದು, ಬಿದರೆಯಿಂದ ನಗರಕ್ಕೆ ಬರುವ ಮಾರ್ಗ ಮಧ್ಯೆದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇವರ ಜೊತೆ ಇದ್ದ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ನಂತರ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೋಲಿಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.