ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದ್ದು, ಇಲ್ಲಿನ ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆಯಲ್ಲಿ ಭಾರಿ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಇದರಿಂದಾಗಿ ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಚಾರ ಸಂಪೂರ್ಣ ಕಡಿತಗೊಂಡು ವಿದ್ಯಾರ್ಥಿಗಳು, ಜನ ಸಾಮಾನ್ಯರು ಪರದಾಡುವಂತಾಗಿದ್ದು, ಈ ಬಗ್ಗೆ ಪಿಡಬ್ಲ್ಯುಡಿ ಇಂಜಿನಿಯರ್ ಜೈ ರಾಮ್ ರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರಿ ಮಳೆ.. ಕೊಚ್ಚಿ ಹೋದ ರಸ್ತೆ, ನೆಲಕ್ಕೆ ಬಿದ್ದ ಅಡಕೆ ಮರ, ಶಾಲೆಗಳಿಗೆ ರಜೆ - ಈಟಿವಿ ಭಾರತ ಕನ್ನಡ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇಲ್ಲಿನ ಹೆಗ್ಗಾರು ಕುಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಭಾರೀ ಮಳೆ : ಕೊಚ್ಚಿ ಹೋದ ರಸ್ತೆ, ನೆಲಕ್ಕೆ ಬಿದ್ದ ಅಡಿಕೆ ಮರಗಳು, ಶಾಲೆಗಳಿಗೆ ರಜೆ
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೂಡಿಗೆರೆ ತಾಲೂಕಿನ ಅಂಗವಾಡಿಯಿಂದ 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಿರುಗಾಳಿ ಸಹಿತ ಮಳೆಗೆ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ಗ್ರಾಮದಲ್ಲಿ ಹರೀಶ್ ಎಂಬುವರಿಗೆ ಸೇರಿದ ಅಡಕೆ ತೋಟಕ್ಕೆ ಹಾನಿಯಾಗಿದೆ. ಮಳೆಯ ಹೊಡೆತಕ್ಕೆ ಇಪ್ಪತ್ತಕ್ಕೂ ಹೆಚ್ಚು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು,ಜೊತೆಗೆ ಮೆಣಸು ಬೆಳೆಗೂ ಹಾನಿಯಾಗಿದೆ.
ಇದನ್ನೂ ಓದಿ :ಯಮುನಾ ನದಿಯಲ್ಲಿ ಮುಳುಗಿದ ದೋಣಿ.. 11 ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
Last Updated : Aug 13, 2022, 1:04 PM IST