ಚಿಕ್ಕಮಗಳೂರು :ಶೃಂಗೇರಿಯ ಶಾರದಾ ಪೀಠಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದು, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ - ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್
ಶೃಂಗೇರಿಯ ಶಾರದಾ ಪೀಠಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿ ಮಠ ವೀಕ್ಷಣೆ ಮಾಡಿ ಶಾರದಾಂಬೆಯ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಳೆ ನಡೆಯಲಿರುವ ಪ್ರಬೋದಿನಿ ಗುರುಕುಲದ ಅರ್ಧ ಮಂಡಲೋತ್ಸವದಲ್ಲಿ ಭಾಗವತ್ ಭಾಗವಹಿಸಲಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಕೆಲಕಾಲ ಮಠದ ಆವರಣದಲ್ಲಿರುವ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆದುಕೊಂಡ ಮೋಹನ್ ಭಾಗವತ್, ನಂತರ ಶೃಂಗೇರಿ ಮಠವನ್ನು ವೀಕ್ಷಿಸಿ ತಾಯಿ ಶಾರದಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಭಾನುವಾರ ಕೊಪ್ಪ ತಾಲೂಕಿನ ಪ್ರಬೋಧಿನಿ ಗುರುಕುಲಕ್ಕೆ 24 ವರ್ಷಗಳು ತುಂಬುತ್ತಿರುವ ಹಿನ್ನಲೆ ಅರ್ಧ ಮಂಡಲೋತ್ಸವ ಕಾರ್ಯಕ್ರಮ ನಡೆಯಲಿದ್ದು, ಭಾಗವತ್ ಭಾಗವಹಿಸಲಿದ್ದಾರೆ.