ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನಳ್ಳಿಯಲ್ಲಿ ಶ್ರೀಗಂಧ ಮರ ಕಡಿಯುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ 15 ಕೆಜಿ ತೂಕದ ಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಮೂಡಿಗೆರೆಯಲ್ಲಿ ಶ್ರೀಗಂಧ ಮರ ಕಳವಿಗೆ ಯತ್ನ: ಒಬ್ಬನ ಬಂಧನ - R F O Mohan Kumar ride upon sandalwood accused at mudiger
ಶ್ರೀಗಂಧ ಮರ ಕಡಿಯುತ್ತಿದ್ದ ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿ ಸುಮಾರು 15 ಕೆಜಿ ತೂಕದ ಗಂಧದ ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿರುವ ಘಟನೆ ಮೂಡಿಗೆರೆಯ ಕನ್ನಳ್ಳಿಯಲ್ಲಿ ನಡೆದಿದೆ.
ಶ್ರೀಗಂಧ ಆರೋಪಿಗಳ ಬಂಧನ
ದಾಳಿ ವೇಳೆ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಮೂವರು ಆರೋಪಿಗಳಲ್ಲಿ ಸ್ವಾಮಿ ಎಂಬಾತನನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ವೇಳೆ, ಮತ್ತಿಬ್ಬರು ಆರೋಪಿಗಳಾದ ಉಮೇಶ್, ಸ್ವಾಮಿ ಎಂಬುವರು ಪರಾರಿಯಾಗಿದ್ದಾರೆ.
ಆರ್ಎಫ್ಒ ಮೋಹನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮೂಡಿಗೆರೆ ಅರಣ್ಯ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.