ಕರ್ನಾಟಕ

karnataka

ETV Bharat / state

ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕಿದೆ: ಧರ್ಮೇಗೌಡ - Vice speaker S. L. Dharmegowda Latest News

ಕೊರೊನಾ ವೈರಸ್ ತಡೆಗಟ್ಟಲು ಮುಖ್ಯಮಂತ್ರಿಗಳು ಹಾಗೂ ಪ್ರಧಾನಿಗಳು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಎಲ್ಲರೂ ಸರ್ಕಾರದ ನಿಯಮ, ಕಾನೂನಿನ ಅಡಿ ಹೋಗುವುದಕ್ಕಿಂತ ನಾವೇ ಸ್ವಯಂ ಪ್ರೇರಿತರಾಗಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಉಪಸಭಾಪತಿ ಎಸ್. ಎಲ್. ಧರ್ಮೇಗೌಡ ತಿಳಿಸಿದ್ದಾರೆ.

Vice speaker S. L. Dharmegowda
ಸ್ವಯಂ ಪ್ರೇರಿತರಾಗಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕಿದೆ: ಧರ್ಮೇಗೌಡ

By

Published : Apr 20, 2020, 7:30 PM IST

ಚಿಕ್ಕಮಗಳೂರು: ಕೋವಿಡ್-19 ವೈರಸ್​ಗೆ ವಿಶ್ವದಲ್ಲಿ ಈಗಾಗಲೇ 1 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಭಾರತದಲ್ಲಿ 17 ಸಾವಿರಕ್ಕೂ ಅಧಿಕ ಜನರು ಬಳಲುತ್ತಿದ್ದಾರೆ ಎಂದು ವಿಧಾನ ಪರಿಷತ್​ನ ಉಪಸಭಾಪತಿ ಎಸ್. ಎಲ್. ಧರ್ಮೇಗೌಡ ತಿಳಿಸಿದ್ದಾರೆ.

ಉಪಸಭಾಪತಿ ಎಸ್. ಎಲ್. ಧರ್ಮೇಗೌಡ

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 339 ಕೊರೊನಾ ಪೀಡಿತರಿದ್ದು, 16 ಜನರು ಸಾವನ್ನಪ್ಪಿದ್ದಾರೆ. ನಮ್ಮ ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ 32 ಲಕ್ಷ ಹಣವನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದ್ದೇವೆ. ಕೊರೊನಾ ವೈರಸ್ ತಡೆಗಟ್ಟಲು ಮುಖ್ಯಮಂತ್ರಿಗಳು ಹಾಗೂ ಪ್ರಧಾನಿಗಳು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಎಲ್ಲರೂ ಸರ್ಕಾರದ ನಿಯಮ, ಕಾನೂನಿನ ಅಡಿ ಹೋಗುವುದಕ್ಕಿಂತ ನಾವೇ ಸ್ವಯಂ ಪ್ರೇರಿತರಾಗಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ABOUT THE AUTHOR

...view details