ಚಿಕ್ಕಮಗಳೂರು :ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಶನಿವಾರ ನಡೆದ ದತ್ತ ಜಯಂತಿ ಶೋಭಾ ಯಾತ್ರೆಯಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ ರವಿ ಕುಣಿದು ಕುಪ್ಪಳಿಸಿದ್ದಾರೆ. ಕೈಯಲ್ಲಿ ಕೇಸರಿ ಧ್ವಜ ಹಿಡಿದು ಶೋಭಾ ಕರಂದ್ಲಾಜೆ ಅವರು ಡಿಜೆ ಹಾಡಿಗೆ ಹೆಜ್ಜೆಹಾಕಿದ್ದು, ಸಿ.ಟಿ ರವಿ ಕೂಡ ಜೊತೆಗಿದ್ದರು.
ಅಲ್ಲದೆ, ಶೋಭಾ ಯಾತ್ರೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು, ದತ್ತ ಮಾಲಾಧಾರಿಗಳು ನೃತ್ಯ ಮಾಡಿದರು. ಇದೇ ವೇಳೆ ರಸ್ತೆಯುದ್ದಕ್ಕೂ ಜೈ ಶ್ರೀ ರಾಮ್ ಹಾಗೂ ಜೈ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಆಲ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಭದ್ರತೆಗಾಗಿ 500ಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.