ಚಿಕ್ಕಮಗಳೂರು:ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಮಕ್ಕಳ ಜೊತೆ ಸರದಿ ಸಾಲಲ್ಲಿ ಕುಳಿತು ಹಾಸ್ಟೆಲ್ ಊಟವನ್ನು ಸವಿದಿದ್ದಾರೆ.
ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದರು. ಈ ವೇಳೆ, ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದರು. ಭೇಟಿಯ ಬಳಿಕ ಹಾಸ್ಟೆಲ್ ಮಕ್ಕಳ ಜೊತೆ ಟೇಬಲ್ ಮೇಲೆ ಸರದಿ ಸಾಲಲ್ಲಿ ಕುಳಿತು ಊಟ ಮಾಡಿದ್ದಾರೆ.