ಚಿಕ್ಕಮಗಳೂರು:ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಿದ್ದರಾಮಯ್ಯನವರು ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ. ಅವರದ್ದು ಸ್ವಂತ ಸಾಧನೆ ಏನೂ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಆದರೆ ಸಿದ್ದರಾಮಯ್ಯನವರು ತಮ್ಮ ಯೋಜನೆ ಎಂದು ಹೇಳಿಕೊಂಡು ಓಡಾಡಿದ್ದಾರೆ. ಸಿದ್ದರಾಮಯ್ಯ ಅಂದ್ರೆನೇ ಸುಳ್ಳು. ಎಲ್ಲಾ ಯೋಜನೆಗಳಿಗೂ ಕೇಂದ್ರ ಸರ್ಕಾರ ಹಣ ನೀಡಿದೆ. ಹಾಗಿದ್ದ ಮೇಲೆ ಸಿದ್ದರಾಮಯ್ಯ ಅವರ ಸ್ವಂತ ಸಾಧನೆ ಏನು ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನವರನ್ನು ರಾಜಧಾನಿ ನೆನಪಿಟ್ಟುಕೊಳ್ಳಲು ಅವರು ಮಾಡಿರುವ ಒಂದು ಸಾಧನೆಯನ್ನಾದರೂ ಹೇಳಿ ನೋಡೋಣ. ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃಪತನದಲ್ಲಿದೆ. ಇದಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರವಾಗಿದ್ದು, ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕೆಂದು ವ್ಯಂಗ್ಯವಾಡಿದ್ರು.