ಚಿಕ್ಕಮಗಳೂರು: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹಾದು ಹೋಗಿರುವ ಎನ್ಹೆಚ್ - 216 ರಸ್ತೆಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಬೇಕು. ಬೈಪಾಸ್ ರಸ್ತೆ ಪಟ್ಟಣದಲ್ಲಿಯೇ ಹಾದು ಹೋಗಿರುವ ಕಾರಣ ಪ್ರತಿನಿತ್ಯ ಸ್ಥಳೀಯರಿಗೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ಮಾಡೋರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ.
ಬೈಪಾಸ್ ರಸ್ತೆಯನ್ನು ಅಗಲೀಕರಣ ಮಾಡೋದರಿಂದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬಹುದಾಗಿದ್ದು, ಈ ಕಾಮಾಗಾರಿ ನಡೆದರೆ ಸ್ಥಳೀಯರಿಗೂ ತುಂಬಾ ಅನುಕೂಲ ಆಗಲಿದೆ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ನಗರ ಪ್ರದೇಶದಲ್ಲಿ 7 ಕಿ.ಮೀ. ದೂರ ರಸ್ತೆ ಅಗಲೀಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಅವರ ಮನವಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.