ಚಿಕ್ಕಮಗಳೂರು:ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬಿದರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳ್ಳಿಬೈಲು ಗ್ರಾಮದ ನಿವಾಸಿಗಳಾದ ಪ್ರಕಾಶ್ (28) ಪ್ರವೀಣ್ (30) ಸ್ಥಳದಲ್ಲಿ ಸಾವನಪ್ಪಿದ್ದು, ರಮೇಶ್ ಎಂಬಾತದಿಂದ ಶೂಟೌಟ್ ನಡೆದಿದೆ.
ಚಿಕ್ಕಮಗಳೂರಲ್ಲಿ ಗುಂಡಿನ ದಾಳಿ.. ಬೈಕ್ನಲ್ಲಿ ಹೋಗುತ್ತಿದ್ದವರ ಮೇಲೆ ಶೂಟೌಟ್, ಇಬ್ಬರು ಸ್ಥಳದಲ್ಲೇ ಸಾವು - ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆ
ಶೂಟೌಟ್ ಮಾಡಿರುವ ವಿಶೇಷಚೇತನ ಆಗಿರುವ ಆರೋಪಿಯನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಕ್ನಲ್ಲಿ ಹೋಗುತ್ತಿದ್ದವರ ಮೇಲೆ ಶೂಟೌಟ್: ಇಬ್ಬರು ಸ್ಥಳದಲ್ಲೇ ಸಾವು
ಫೈರಿಂಗ್ ಮಾಡಿದಾತ ವಿಶೇಷಚೇತನ ಎಂದು ಹೇಳಲಾಗುತ್ತಿದ್ದು, ಆರೋಪಿಯನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಮೃತ ದೇಹಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ:ನಿಕ್ಕಿ ಯಾದವ್ ಹತ್ಯೆ ಪ್ರಕರಣ: ವಿವಾಹ ಸಾಕ್ಷಿ ಪಡೆಯಲು ಆರೋಪಿಯೊಂದಿಗೆ ಆರ್ಯ ಸಮಾಜ ಮಂದಿರಕ್ಕೆ ತೆರಳಿದ್ದ ಪೊಲೀಸರು
Last Updated : Feb 20, 2023, 2:56 PM IST