ಕರ್ನಾಟಕ

karnataka

ETV Bharat / state

ಇಬ್ಬರು ಪೊಲೀಸರಿಗೆ ಕೊರೊನಾ ದೃಢ.. ಶೃಂಗೇರಿ ಪೊಲೀಸ್ ಠಾಣೆ ಸೀಲ್‌ಡೌನ್

10 ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಶೃಂಗೇರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 29 ಜನ ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ..

By

Published : Aug 3, 2020, 5:16 PM IST

Police station sealdown
Police station sealdown

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯನ್ನು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.

ಶೃಂಗೇರಿ ಪೊಲೀಸ್ ಠಾಣೆಗೆ ಹಾವೇರಿಯಿಂದ ಕರ್ತವ್ಯ ನಿರ್ವಹಿಸಲು ಬಂದಿದ್ದ 12 ಕೆಎಸ್‌ಆರ್‌ಪಿ ಪೊಲೀಸ್ ಸಿಬ್ಬಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿದೆ. ಈ ಹಿನ್ನೆಲೆ ಶೃಂಗೇರಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಉಳಿದ 10 ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಶೃಂಗೇರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 29 ಜನ ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಕೊರೊನಾ ಸೋಂಕು ಕಾಣಿಸಿದ ಇಬ್ಬರು ಪೊಲೀಸರನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details