ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ನನ್ನ ವಿರುದ್ಧದ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ.. ಮತ್ತೆ ಗುಡುಗಿದ ಸಿದ್ದರಾಮಯ್ಯ

ಮಳೆಹಾನಿ ವೀಕ್ಷಣೆಗೆ ತೆರಳಿದ್ದ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೊಡಗಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಎಸ್​ಪಿ ಕಚೇರಿಗೂ ಮುತ್ತಿಗೆ ಹಾಕುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah
ಸಿದ್ದರಾಮಯ್ಯ

By

Published : Aug 19, 2022, 12:15 PM IST

ಚಿಕ್ಕಮಗಳೂರು: ಕೊಡಗಿನಲ್ಲಿ ನನ್ನ ವಿರುದ್ಧ ಪ್ರತಿಭಟನೆ ಮಾಡಲು ಸರ್ಕಾರವೇ ಕುಮ್ಮಕ್ಕು ನೀಡಿದೆ. ಈ ಬಾರಿ ಕೊಡಗಿನಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನ ಗೆಲ್ಲುವ ಸಂಭವವಿದೆ. ಈ ಹತಾಶೆಯಿಂದ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಸಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋ ಬ್ಯಾಕ್ ಅಂದ್ರೆ ಎಲ್ಲಿಗೆ ಹೋಗಲಿ. ಸೆಕ್ಯೂರಿಟಿ ನೀಡುವುದು ಪೊಲೀಸರ ಜವಾಬ್ದಾರಿ. ಬಿಜೆಪಿಯವರು ಮೂರು ನಾಲ್ಕು ಕಡೆ ಪ್ರತಿಭಟನೆ ಮಾಡುತ್ತಿರುವುದು ಗೊತ್ತಿದ್ದರೂ ಪೊಲೀಸರು ಸುಮ್ಮನಾಗಿದ್ದರು. ಅದೇ ಸಿಎಂ ಬಂದಿದ್ರೆ ಹೀಗೆ ಪೊಲೀಸರು ಮಾಡ್ತಿದ್ರಾ.? ಎಂದು ಕೊಡಗು ಪೊಲೀಸರ ವಿರುದ್ಧ ಗರಂ ಆದರು.

ಬಾಸಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕೆಟ್ಟ ಮತ್ತು ಭ್ರಷ್ಟ ಸರ್ಕಾರವಿದೆ. ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೊಡಗಿನಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ. ನನ್ನ ನೇತೃತ್ವದಲ್ಲಿ ಎಸ್​ಪಿ ಕಚೇರಿಗೂ ಮುತ್ತಿಗೆ ಹಾಕುತ್ತೇವೆ ಎಂದರು.

ಇದನ್ನೂ ಓದಿ:ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ.. ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ABOUT THE AUTHOR

...view details