ಚಿಕ್ಕಮಗಳೂರು:ಶೃಂಗೇರಿಯ ಶಾರದಾ ಪೀಠಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು. ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ದೇಗುಲಕ್ಕೆ ತೆರಳಿದ್ದರು.
ಶೃಂಗೇರಿ ಶಾರದಾ ಪೀಠಕ್ಕೆ ಸಿದ್ದರಾಮಯ್ಯ ಭೇಟಿ, ವಿಶೇಷ ಪೂಜೆ ಸಲ್ಲಿಕೆ - Etv Bharat Kannada
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶೃಂಗೇರಿ ಶಾರದಾ ಪೀಠಕ್ಕೆ ಸಿದ್ದರಾಮಯ್ಯ ಭೇಟಿ
ದೇವಿಯ ದರ್ಶನ ಪಡೆದ ಬಳಿಕ ನರಸಿಂಹ ವನದಲ್ಲಿರುವ ಜಗದ್ಗುರುಗಳ ನಿವಾಸಕ್ಕೆ ತೆರಳಿ ಶ್ರೀ ಜಗದ್ಗುರು ವಿಧುಶೇಖರ ಭಾರತಿ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಉಪಸ್ಥಿತರಿದ್ದರು.
ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವದಲ್ಲಿ ಸಾವರ್ಕರ್ ಉತ್ಸವ ಆಚರಣೆ: ಪ್ರಮೋದ್ ಮುತಾಲಿಕ್