ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಚಿಕ್ಕಮಗಳೂರು ಜಿಲ್ಲಾದ್ಯಂತ ಶುಕ್ರವಾರ ಪ್ರವಾಸ ಹಮ್ಮಿಕೊಂಡಿದ್ದರು. ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಆಗಮಿಸಿದ ಅವರಿಗೆ ಕೊಡಗಿಲ್ಲಿ ಕಪ್ಪುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ ಕಾರಿಗೆ ಮೊಟ್ಟೆ ಎಸೆದ ಘಟನೆ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲೂ ಘಟನೆ ಮರುಕಳಿಸಿದೆ.
ಜಿಲ್ಲೆಯ ಶೃಂಗೇರಿ, ಕೊಪ್ಪ, ಬಾಳೆಹೊನ್ನೂರು ಭಾಗದ ನೆರೆ ಪೀಡಿತ ಪ್ರದೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಹೋಗುವ ದಾರಿ ಮಧ್ಯೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ಮೂಡಿಗೆರೆ ಬಂದ ಸಿದ್ದರಾಮಯ್ಯ ಅವರ ವಿರುದ್ಧ ಸಾವರ್ಕರ್ ಫೋಟೋ ಹಿಡಿದು ಹಿಂದೂಪರ ಕಾರ್ಯಕರ್ತರು ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.