ಕರ್ನಾಟಕ

karnataka

ETV Bharat / state

ಕಾಫಿನಾಡಿನೊಳಗೆ ಮಡದಿಯೊಂದಿಗೆ 'ಮುದ್ದಿನ ಮಾವ'.. - Balasubramanyam visit Chikmagalur

ಶಶಿಕುಮಾರ್ ಹಾಗೂ ಶೃತಿ ಅಭಿನಯದ ಮುದ್ದಿನ ಮಾವ ಚಿತ್ರದ ಚಿತ್ರೀಕರಣಕ್ಕಾಗಿ ಜಿಲ್ಲೆಯ ಶೃಂಗೇರಿ, ಹೊರನಾಡು, ಕಳಸ ಸೇರಿ ಧಾರ್ಮಿಕ ಹಾಗೂ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದರು..

Singer SP Balasubramanyam visit Chikmagalur district many times
ಕಾಫಿನಾಡಿಗೆ ಹಲವು ಬಾರಿ ಭೇಟಿ ನೀಡಿದ್ದ ಗಾನ ಗಂಧರ್ವ

By

Published : Sep 25, 2020, 5:12 PM IST

ಚಿಕ್ಕಮಗಳೂರು :ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಜಿಲ್ಲೆಯಲ್ಲಿ ಹಲವು ಸಂಗೀತ ಕಾರ್ಯಕ್ರಮಗಳನ್ನ ನಡೆಸಿಕೊಟ್ಟಿದ್ದರು. ಜೊತೆಗೆ ವಿವಿಧ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೂ ಅನೇಕ ಬಾರಿ ಭೇಟಿ ನೀಡಿದ್ದರು.

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದ ಎಸ್​ಪಿಬಿ ದಂಪತಿ

ಶಶಿಕುಮಾರ್ ಹಾಗೂ ಶೃತಿ ಅಭಿನಯದ ಮುದ್ದಿನ ಮಾವ ಚಿತ್ರದ ಚಿತ್ರೀಕರಣಕ್ಕಾಗಿ ಜಿಲ್ಲೆಯ ಶೃಂಗೇರಿ, ಹೊರನಾಡು, ಕಳಸ ಸೇರಿ ಧಾರ್ಮಿಕ ಹಾಗೂ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದರು. ಇಲ್ಲಿ ಚಿತ್ರೀಕರಣವೂ ನಡೆದಿತ್ತು. ಸಂಗೀತ ಕ್ಷೇತ್ರದ ದಿಗ್ಗಜರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಜಿಲ್ಲೆಯಲ್ಲಿ ಹಲವು ಸಂಗೀತ ಕಾರ್ಯಕ್ರಮಗಳನ್ನ ನಡೆಸಿಕೊಟ್ಟಿದ್ದಾರೆ.

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದ ಎಸ್​ಪಿಬಿ ದಂಪತಿ

2006ರಲ್ಲಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಆವರಣದಲ್ಲಿ ನಡೆದ ಸಂಗೀತದ ಕಾರ್ಯಕ್ರಮಕ್ಕೂ ಆಗಮಿಸಿದ್ದರು. ಆದರೆ, ಬಾಳೆಹೊನ್ನೂರಿನಲ್ಲಿ ಭಾರೀ ಮಳೆ ಸುರಿದ್ದಿದ್ದರಿಂದ ಅಂದು ಕಾರ್ಯಕ್ರಮ ನಡೆದಿರಲಿಲ್ಲ. ಹೀಗಾಗಿ, ಅಂದು ದಂಪತಿ ಸಮೇತ ರಂಭಾಪುರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ABOUT THE AUTHOR

...view details