ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಕುಟುಂಬ ಸಮೇತ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಗಾಯಕ ವಿಜಯ್ ಪ್ರಕಾಶ್ - ಶೃಂಗೇರಿ ಶಾರದಾ ಪೀಠ
ಗಾಯಕ ವಿಜಯ್ ಪ್ರಕಾಶ್ ಅವರು ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
Vijay prakash
ಕಳೆದ ಎರಡೂವರೆ ತಿಂಗಳಿನಿಂದ ಕೊರೊನಾ ವೈರಸ್ ಭೀತಿಯಿಂದಾಗಿ ಶೃಂಗೇರಿ ಶಾರದಾ ಪೀಠಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಲಾಕ್ಡೌನ್ ಕೊಂಚ ಸಡಿಲಿಕೆಗೊಂಡ ಬಳಿಕ ಕಳೆದ ಮೂರು ದಿನಗಳಿಂದ ಸಾರ್ವಜನಿಕರ ಪ್ರವೇಶಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಅವಕಾಶ ನೀಡಿದ್ದು, ಭಕ್ತರು ದೇವಸ್ಥಾನಕ್ಕೆ ಬರಲು ಪ್ರಾರಂಭ ಮಾಡಿದ್ದಾರೆ.
ಈ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು, ನಂತರ ಜಗದ್ಗುರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.