ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಪ್ರವಾಹ: ಜನರ ಸಂಕಷ್ಟ ಬಗೆಹರಿಯಲಿ ಎಂದು ಕಾಂಗ್ರೆಸ್​​ನಿಂದ ಪೂಜೆ - heavy rain

ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಗಳು ಬಗೆಹರಿಯಲಿ ಎಂದು ಶೃಂಗೇರಿ ತಾಲೂಕಿನ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ದೇವರಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

Special worship from Congress
ಕಾಂಗ್ರೆಸ್​​ನಿಂದ ಪೂಜೆ

By

Published : Aug 8, 2020, 2:16 PM IST

ಚಿಕ್ಕಮಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೂಚನೆ ಮೇರೆಗೆ ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಜನರು ಸುಭಿಕ್ಷೆವಾಗಿರಲೆಂದು ಶೃಂಗೇರಿ ತಾಲೂಕಿನ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ದೇವರಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಿಗಳು, ಹೊಲ, ಗದ್ದೆ, ತೋಟಗಳು ಜಲಾವೃತವಾಗಿವೆ. ರೈತರು ಹಾಗೂ ಸಾರ್ವಜನಿಕರು ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಜನರ ಸಂಕಷ್ಟ ಬಗೆಹರಿಯಲಿ ಎಂದು ಪ್ರಾರ್ಥಿಸಿದರು.

ABOUT THE AUTHOR

...view details