ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ತಹಸೀಲ್ದಾರ್ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ವಿಜೇತ್ ಎಂಬಾತನೆ ಆತ್ಮಹತ್ಯೆಗೆ ಶರಣಾದ ಚಾಲಕನಾಗಿದ್ದು, ಕಾರಣ ತಿಳಿದುಬಂದಿಲ್ಲ.
ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ಗತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ವಿಜೇತ್ ನೇಣಿಗೆ ಶರಣಾಗಿದ್ದು, ಕಳೆದ 15 ದಿನಗಳ ಹಿಂದೆ ಬಂಧನಕ್ಕೆ ಒಳಗಿದ್ದ ಶೃಂಗೇರಿ ತಹಸೀಲ್ದಾರ್ ಅಂಬುಜಾ ಅವರ ವಾಹನ ಚಾಲಕನಾಗಿದ್ದ. ಹಕ್ಕುಪತ್ರ ವಿತರಣೆಯಲ್ಲಿ ಭ್ರಷ್ಟಾಚಾರ ಕಂಡುಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಅಂಬುಜಾ ಅವರ ಬಂಧನವಾಗಿತ್ತು.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ