ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಮೆಡಿಕಲ್​ ಕಾಲೇಜ್​ನಲ್ಲಿ ನೇಮಕಾತಿ: ₹20 ಸಾವಿರ ವೇತನ - ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆಗಾಗಿ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್​ ನರ್ಸ್​ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Staff Nurse Recruitment in Chikkamagaluru Medical College; 20 thousand monthly salary
Staff Nurse Recruitment in Chikkamagaluru Medical College; 20 thousand monthly salary

By

Published : Mar 28, 2023, 1:50 PM IST

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಟಾಫ್​ ನರ್ಸ್​ಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆಗಾಗಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳ ಭರ್ತಿ ಕ್ರಮಕ್ಕೆ ಮುಂದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು.

ಅಧಿಸೂಚನೆ

ಹುದ್ದೆ ವಿವರ: ಆರು ತಿಂಗಳ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದ್ದು, ಹುದ್ದೆಗಳ ನವೀಕರಣ ಸರ್ಕಾರದ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ವಿದ್ಯಾರ್ಹತೆ:ಬಿಎಸ್ಸಿ ನರ್ಸಿಂಗ್​ ಕೋರ್ಸ್​ ಪದವಿ ಹೊಂದಿರಬೇಕು. ಎಂಎಸ್ಸಿ ನರ್ಸಿಂಗ್​ ಪದವಿ ಹೊಂದಿದ ಅಭ್ಯರ್ಥಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.

ವೇತನ: ಮಾಸಿಕ 20 ಸಾವಿರ ಸಂಚಿತ ವೇತನ.

ಅರ್ಜಿ ಸಲ್ಲಿಕೆ:ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 250 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ ಶುಲ್ಕ ನಿಗದಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆ ಸೇರಿದಂತೆ ಇನ್ನಿತರ ಅಗತ್ಯ ಪ್ರಮಾಣ ಪತ್ರಗಳನ್ನು ನಿರ್ದೇಶಕರು ಕಚೇರಿ, ಹಳೆಯ ಪಿಡಬ್ಲ್ಯೂಡಿ ಬಿಲ್ಡಿಂಗ್​​, ಆಜಾದ್​ ಪಾರ್ಕ್​ ಹತ್ತಿರ, ಚಿಕ್ಕಮಗಳೂರು- 577101 ಇಲ್ಲಿಗೆ ರಿಜಿಸ್ಟರ್​ ಪೋಸ್ಟ್​​ ಮೂಲಕ ಕಳುಹಿಸಲಾಗುವುದು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 38 ವರ್ಷ ಮೀರಿರಬಾರದು. ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 3ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮಾರ್ಚ್​ 23 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್​ 10 ಕಡೆಯ ದಿನಾಂಕ.

ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರ ಪಡೆಯಲು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕೃತ ಜಾಲತಾಣ cimschikkamagaluru.karnataka.gov.in ಗೆ ಭೇಟಿ ನೀಡಿ.

ಇದನ್ನೂ ಓದಿ: ಇಗ್ನೋದಲ್ಲಿ ಉದ್ಯೋಗಾವಕಾಶ.. 200 ಟೈಪಿಸ್ಟ್​ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details