ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಧರ್ಮೀಯ ಅರ್ಚಕರನ್ನು ನೇಮಕ ಮಾಡಬೇಕೆಂಬ ಬೇಡಿಕೆಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ. ಶನಿವಾರ ಸಂಜೆ ಇಬ್ಬರು ಅರ್ಚಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿಂದೂ-ಮುಸ್ಲಿಮರ ಸೌಹಾರ್ದ ಧಾರ್ಮಿಕ ಕೇಂದ್ರವಾಗಿದ್ದ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಕಳೆದ ಮೂರು ದಶಕಗಳಿಂದ ವಿವಾದದ ಕೇಂದ್ರವಾಗಿದ್ದು, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಇತ್ತೀಚೆಗೆ ಸರ್ಕಾರ ನ್ಯಾಯಾಲಯದ ಆದೇಶದನ್ವಯ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕೈಗೊಳ್ಳಬೇಕಾದ ಪೂಜಾ ವಿಧಾನಗಳ ಮೇಲ್ವಿಚಾರಣೆಗಾಗಿ 8 ಮಂದಿ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಇತ್ತೀಚೆಗೆ ಸಭೆ ನಡೆಸಿ ಹಿಂದೂ ಅರ್ಚಕರ ನೇಮಕ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಪ್ರಸ್ತಾವ ಸಲ್ಲಿಸಿತ್ತು.
ಇದನ್ನೂ ಓದಿ:ದತ್ತಪೀಠ ಹಿಂದೂ ಅರ್ಚಕರ ನೇಮಕ ತಿರಸ್ಕರಿಸಿದ್ದ ಸಿದ್ದರಾಮಯ್ಯ ಯಾವಸೀಮೆ ಜಸ್ಟಿಸ್ : ಸಿ ಟಿ ರವಿ ಪ್ರಶ್ನೆ