ಚಿಕ್ಕಮಗಳೂರು:ಚಿಕ್ಕಮಗಳೂರು ತಾಲೂಕಿನ ಅರಿಶಿನಗುಪ್ಪೆ ಅರಣ್ಯ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿ ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಅರಿಶಿನಗುಪ್ಪೆ ಅರಣ್ಯ ಪ್ರದೇಶ ಸರ್ವೇ ನಂ. 52 ರಲ್ಲಿ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ನಾಲ್ಕು ದಿನಗಳ ಹಿಂದೆ ರಾತ್ರೋರಾತ್ರಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು.ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದರ ತೆರವಿಗೆ ಮುಂದಾದಾಗ ಪ್ರತಿಭಟನಾನಿರತ ಮಹಿಳೆಯರು ಪ್ರತಿಮೆಯನ್ನು ತಬ್ಬಿ ಗೋಳಾಡಿದ್ರು. ಈ ಸಂದರ್ಭ ಪ್ರತಿಭಟನಾಕಾರರು ಹಾಗೂ ಪ್ರತಿಮೆಯನ್ನು ಪೊಲೀಸರು ವಶಕ್ಕೆ ಪಡೆದರು.