ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಬೀದಿನಾಯಿ ಉಪಟಳ ಹೆಚ್ಚಳ: ದಾಳಿಗೊಳಗಾದವರೆಷ್ಟು ಗೊತ್ತಾ? - ಜಿಲ್ಲೆಯಲ್ಲಿ ಬೀದಿನಾಯಿಗಳ ದಾಳಿ ಹೆಚ್ಚಳ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆಡೆ ಕಾಡು ಪ್ರಾಣಿಗಳ ಹಾವಳಿಯಾದರೆ, ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಳವಾಗಿದೆ.

stray-dog-attack-increased-in-chikkamagaluru
ಚಿಕ್ಕಮಗಳೂರಿನಲ್ಲಿ ಬೀದಿನಾಯಿ ಹಾವಳಿ ಹೆಚ್ಚಳ : ಶ್ವಾನ ದಾಳಿಗೆ ಒಳಗಾದವರು ಎಷ್ಟು ಗೊತ್ತಾ ?

By ETV Bharat Karnataka Team

Published : Oct 2, 2023, 9:18 PM IST

ಚಿಕ್ಕಮಗಳೂರಿನಲ್ಲಿ ಬೀದಿನಾಯಿ ಹಾವಳಿ ಹೆಚ್ಚಳ

ಚಿಕ್ಕಮಗಳೂರು : ಜಿಲ್ಲೆಯ ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗುತ್ತಿದೆ. ಕಳೆದ 8 ತಿಂಗಳಲ್ಲಿ ನಗರದ ವಿವಿಧೆಡೆ 12 ಸಾವಿರಕ್ಕೂ ಅಧಿಕ ಮಂದಿಗೆ ಬೀದಿ ನಾಯಿಗಳು ದಾಳಿ ನಡೆಸಿವೆ. ಕಾಡು ಪ್ರಾಣಿಗಳ ದಾಳಿಗೆ ಜಿಲ್ಲೆಯ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಅಪಾರ ಬೆಳೆ ಹಾನಿ ಉಂಟಾಗಿದೆ. ಕಾಡಾನೆ ದಾಳಿಗೆ ಸಿಲುಕಿ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ರಾತ್ರಿ ವೇಳೆ ಬೀದಿ ನಾಯಿಗಳ ಉಪಟಳ ಜಾಸ್ತಿ. ಬೈಕ್​ನಲ್ಲಿ ಹೋಗುವವವರು, ಸೈಕಲ್​ನಲ್ಲಿ ಹೋಗುವವರು, ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಮೇಲೆಲ್ಲ ನಾಯಿಗಳು ದಾಳಿ ಮಾಡಿವೆ. ಪುಟ್ಟ ಮಕ್ಕಳನ್ನೂ ಗಾಯಗೊಳಿಸಿವೆ. ಚಿಕ್ಕಮಗಳೂರು ನಗರದಲ್ಲಿಯೇ ಸುಮಾರು 6 ಸಾವಿರಕ್ಕೂ ಅಧಿಕ ಬೀದಿ ನಾಯಿಗಳು ಕಚ್ಚಿರುವ ಪ್ರಕರಣಗಳಿವೆ. ಈ ಮಾಹಿತಿ ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದ ತಿಳಿದುಬಂದಿದೆ.

ಚಿಕ್ಕಮಗಳೂರು ನಗರ ಮತ್ತು ಒಟ್ಟಾರೆ ಜಿಲ್ಲೆಯಲ್ಲಿ ಶ್ವಾನ ದಾಳಿ ಪ್ರಕರಣಗಳನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಾಸ್ತಿಯಾಗಿದೆ. ಕೇವಲ ಎಂಟು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 12,027 ಪ್ರಕರಣಗಳು ದಾಖಲಾಗಿವೆ. ಗರಿಷ್ಠ ಶೇ 95ರಷ್ಟು ಪ್ರಕರಣಗಳಲ್ಲಿ ಬೀದಿ ಶ್ವಾನಗಳೇ ದಾಳಿ ನಡೆಸಿರುವುದು ತಿಳಿದುಬಂದಿದೆ. ಚಿಕ್ಕಮಗಳೂರು ನಗರದಲ್ಲಿ ಒಟ್ಟು 6,336 ಪ್ರಕರಣಗಳು ವರದಿಯಾಗಿದೆ. ಕಡೂರು 1756, ತರೀಕೆರೆ 1168, ಎನ್​ಆರ್ ಪುರ 588, ಕೊಪ್ಪದಲ್ಲಿ 969, ಶೃಂಗೇರಿ 433, ಮೂಡಿಗೆರೆ 391 ಶ್ವಾನ ದಾಳಿ ಪ್ರಕರಣಗಳಿವೆ.

ಈ ಸಂಬಂಧ ಜಿಲ್ಲಾ ಆರೋಗ್ಯ ಇಲಾಖೆಯು ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಜನರಿಗೆ ನೀಡುವ ಇಂಜೆಕ್ಷನ್​ನಲ್ಲಿ ಯಾವುದೇ ಕೊರತೆ ಇಲ್ಲ. ಕಳೆದ ವರ್ಷ 13 ಸಾವಿರ ಪ್ರಕರಣಗಳು ದಾಖಲಾಗಿದ್ದವು. ಈ ಸಲ ಅತಿ ಹೆಚ್ಚು ಶ್ವಾನ ದಾಳಿ ಪ್ರಕರಣಗಳು ವರದಿಯಾಗಿವೆ ಎಂದು ಡಿಹೆಚ್ಒ ಡಾ.ಆಶ್ವಥ್ ಬಾಬು ತಿಳಿಸಿದ್ದಾರೆ. ಬೀದಿ ನಾಯಿಗಳಿಂದಾಗಿ ರಾತ್ರಿ ವೇಳೆ ಓಡಾಡಲು ಜನರು ಭಯಪಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮಂಗಳೂರಿನಲ್ಲಿ 60 ಬಸ್​ಗಳ ಒಡೆಯ ಆತ್ಮಹತ್ಯೆ.. ಸಾಲು ಸಾಲು ಬಸ್​ಗಳೊಂದಿಗೆ ಮಾಲೀಕನ ಅಂತಿಮಯಾತ್ರೆ

ABOUT THE AUTHOR

...view details