ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು : ಸಿಇಟಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನಿಸಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಾತಿ ಪರೀಕ್ಷೆ ವೇಳೆ ಅಕ್ರಮಕ್ಕೆ ಯತ್ನಿಸಿದ ವಿದ್ಯಾರ್ಥಿಯನ್ನು ಚಿಕ್ಕಮಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ..

student-held-for-illegal-charges-in-cet-exam
ಚಿಕ್ಕಮಗಳೂರು: ಸಿಇಟಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನಿಸಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

By

Published : Jun 18, 2022, 6:10 PM IST

ಚಿಕ್ಕಮಗಳೂರು :ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಾತಿ(ಸಿಇಟಿ) ಪರೀಕ್ಷೆ ವೇಳೆ ಅಕ್ರಮಕ್ಕೆ ಯತ್ನಿಸಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾರ್ಥಿಯು ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೊಬೈಲ್ ಜೊತೆಗೆ ವಿದ್ಯಾರ್ಥಿ ಸಿಕ್ಕಿ ಬಿದ್ದಿದ್ದಾನೆ. ರಸಾಯನಶಾಸ್ತ್ರ ವಿಷಯದ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್​ನಲ್ಲಿ ಫೋಟೋ ತೆಗೆದುಕೊಂಡು ಗೂಗಲ್​ನಲ್ಲಿ ಉತ್ತರ ಹುಡುಕುವ ಪ್ರಯತ್ನ ನಡೆಸಿದ್ದಾನೆ ಎನ್ನಲಾಗಿದೆ.

ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಪರಿಶೀಲಿಸಿದಾಗ ವಿದ್ಯಾರ್ಥಿ ಬಳಿ ಮೊಬೈಲ್ ಪತ್ತೆಯಾಗಿದೆ. ಬಳಿಕ ಆತನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ನಗರ ಪೊಲೀಸ್​​ ಠಾಣೆಯಲ್ಲಿ ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಸ್ಯಾಂಡಲ್​ವುಡ್​ ಯುವ ನಟನ ಬರ್ಬರ ಹತ್ಯೆ

ABOUT THE AUTHOR

...view details