ಚಿಕ್ಕಮಗಳೂರು:ಜಿಲ್ಲೆಯ ಜಿಲ್ಲಾ ಸಹಕಾರ ಬ್ಯಾಂಕ್‌ನ ಚುನಾವಣೆ ಭರ್ಜರಿ ಕಾವು ಪಡೆಯುತ್ತಿದ್ದು, ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ತಮ್ಮ ಸೂಚಕರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - SL Bhojegowda filed for nomination
ಇದೇ ತಿಂಗಳ 29 ರಂದು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಸಹಕಾರ ಬ್ಯಾಂಕ್‌ನ ಚುನಾವಣೆ ನಡೆಯಲಿದ್ದು, ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಎಸ್ ಎಸ್ ಭೋಜೇಗೌಡ, ಇದೇ ತಿಂಗಳ 29 ರಂದು ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರೈತರ ಪರವಾಗಿ ಹಲವಾರು ವರ್ಷಗಳ ಕಾಲ ದುಡಿದಿದ್ದೇನೆ, ತುಂಬಾ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೇನೆ ಎಂದರು.
ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದಂತಹ ಸಂದರ್ಭದಲ್ಲಿ ತುಂಬಾ ಜನ ರೈತರಿಗೆ ಸಾಲ ಮನ್ನಾ ಆಗಿದೆ. ಕಟ್ಟಡಗಳ ನಿರ್ಮಾಣಕ್ಕೆ ನಿಧಿಯನ್ನು ನೀಡಿದ್ದೇವೆ. ನಿರೋದ್ಯೋಗಿಗಳಾಗಿದ್ದ ಯುವಕರಿಗೆ ಉದ್ಯೋಗ ನೀಡಿದ್ದೇವೆ. ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ನೀಡಿದ್ದೇವೆ. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಹೀಗಾಗಿ ಈ ಬಾರಿ ರೈತರು ಮತ್ತೊಮ್ಮೆ ನಮ್ಮನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.