ಚಿಕ್ಕಮಗಳೂರು: ಬೆಳಗಾವಿ ಮೂಲದ ಸೂಪರ್ ವೈಸರ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಾವಿಗೆ ಶರಣಾದ ವ್ಯಕ್ತಿಯನ್ನು ಬಸವರಾಜ್ ಲಿಂಗಪ್ಪ (47) ಎಂದು ಗುರುತಿಸಲಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್‌ನಲ್ಲಿ ಘಟನೆ ನಡೆದಿದೆ.
ಸದ್ಯ ಒಬ್ಬ ಗುತ್ತಿಗೆದಾರನ ಬಳಿ ಸೂಪರ್‌ವೈಸರ್ ಆಗಿ ಲಿಂಗಪ್ಪ ಕೆಲಸ ಮಾಡುತ್ತಿದ್ದರು. ಕಳೆದ 10 ದಿನಗಳಿಂದ ಬಾಳೆಹೊನ್ನೂರಿನಲ್ಲಿದ್ದು ಕೆಲಸ ಮಾಡುತ್ತಿದ್ದರು. ಕಳೆದ ಆರು ವರ್ಷಗಳಿಂದ ಬೇರೆ ಗುತ್ತಿಗೆದಾರನ ಬಳಿ ಕೆಲಸ ಮಾಡಿದ್ದು, ಆರು ವರ್ಷದ ಕೆಲಸದ ಸಂಬಳ ನೀಡದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.