ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಶಂಕಿತ ವ್ಯಕ್ತಿ ಸೆರೆ, ಜಿಲೆಟಿನ್​ ಕಡ್ಡಿ, ಸ್ಫೋಟಕ ವಶ - undefined

ಮೂಡಿಗೆರೆ ತಾಲೂಕಿನ ಕಳಸದಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದು, ಆತನ ಬಳಿಯಿದ್ದ ಜಿಲೆಟಿನ್ ಕಡ್ಡಿಗಳು ಹಾಗೂ ಸ್ಫೋಟಕ ವಸ್ತುಗಳನ್ನು ಪೊಲೀಸರು ವ ಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಎಸ್​ಪಿ ಹರೀಶ್ ಪಾಂಡೆ

By

Published : Mar 27, 2019, 7:34 PM IST

ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದು, ಆತನ ಬಳಿಯಿದ್ದ ಜಿಲೆಟಿನ್ ಕಡ್ಡಿಗಳು ಹಾಗೂ ಸ್ಫೋಟಕ ವಸ್ತುಗಳಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಎಸ್​ಪಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಚಾರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದು, ಈ ಸ್ಫೋಟಕ ವಸ್ತುಗಳು ಬಂಧಿತ ವ್ಯಕ್ತಿಯ ಮನೆಯ ಮೇಲೆ ಹೇಗೆ ಬಂದವು. ಹಾಗೂ ಈ ವಸ್ತುಗಳು ಎಲ್ಲಿಂದ ಇಲ್ಲಿಗೆ ಬಂದಿವೆ. ಇವುಗಳನ್ನು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದರ ಕುರಿತು, ಬಂಧಿತ ವ್ಯಕ್ತಿಯಿಂದ ವಿಚಾರಣೆ ಮಾಡಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಎಸ್​ಪಿ ಹರೀಶ್ ಪಾಂಡೆ

ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಇಂದೂ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗುತ್ತಿದೆ ಎಂದೂ ಜಿಲ್ಲಾ ಎಸ್​ಪಿ ಹರೀಶ್ ಪಾಂಡೆ ತಿಳಿಸಿದ್ರು.

For All Latest Updates

TAGGED:

ABOUT THE AUTHOR

...view details