ಚಿಕ್ಕಮಗಳೂರು: ಮಂಗಳೂರಿನಿಂದ ಬಿಜಾಪುರಕ್ಕೆ ಆ್ಯಂಬುಲೆನ್ಸ್ ಮೂಲಕ 21 ಜನರನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಚಿಕ್ಕಮಗಳೂರು ಪೊಲೀಸರು ಆ್ಯಂಬುಲೆನ್ಸ್ನನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ಹಣ ಪಡೆದು ಆ್ಯಂಬುಲೆನ್ಸ್ನಲ್ಲಿ 21 ಜನರ ಸಾಗಣೆ: ಚಾಲಕ ಪೊಲೀಸ್ ವಶಕ್ಕೆ - ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು
ಆ್ಯಂಬುಲೆನ್ಸ್ನಲ್ಲಿ 21 ಜನರನ್ನು ಕರೆದುಕೊಂಡು ಹೋಗುತ್ತಿರುವಾಗ, ಬಾಳೆಹೊನ್ನೂರು ಪೊಲೀಸರು ತಡೆದಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

ಆ್ಯಂಬುಲೆನ್ಸ್ನಲ್ಲಿ 21 ಜನರನ್ನು ಕರೆದುಕೊಂಡು ಹೋಗುತ್ತಿದ್ದ ಚಾಲಕ
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಈ ಘಟನೆ ನಡೆದಿದೆ. ಆ್ಯಂಬುಲೆನ್ಸ್ನಲ್ಲಿದ್ದ 21 ಜನರನ್ನೂ ತಡೆದ ಬಾಳೆಹೊನ್ನೂರು ಪೊಲೀಸರು, ಎಲ್ಲರಿಗೂ ಎನ್.ಆರ್. ಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ಆಶ್ರಯ ನೀಡಿದ್ದಾರೆ.
ಆ್ಯಂಬುಲೆನ್ಸ್ನಲ್ಲಿ 21 ಜನರನ್ನು ಕರೆದುಕೊಂಡು ಹೋಗುತ್ತಿದ್ದ ಚಾಲಕ
ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಪ್ರತಿ ವ್ಯಕ್ತಿಯಿಂದ ತಲಾ 2 ಸಾವಿರ ರೂ.ವನ್ನು ಆ್ಯಂಬುಲೆನ್ಸ್ ಚಾಲಕ ಪಡೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
Last Updated : Apr 8, 2020, 9:26 PM IST